ಅವಿವೇಕಿಯ ಮಾರ್ಗ ವು ತನ್ನ ಕಣ್ಣುಗಳಿಗೆ ನೆಟ್ಟಗಾಗಿದೆ; ಆಲೋಚನೆಗೆ ಕಿವಿಗೊಡುವವನು ಜ್ಞಾನಿಯಾಗಿದ್ದಾನೆ.
TSK
TSK · ಙ್ಞಾನೋಕ್ತಿಗಳು 26:12
Treasury of Scripture Knowledge references in Kannada KJV.
ಮೂಢನ ಮೂರ್ಖ ತನಕ್ಕೆ ತಕ್ಕಂತೆ ಉತ್ತರಕೊಡು; ಇಲ್ಲವಾದರೆ ತನ್ನ ದೃಷ್ಟಿ ಯಲ್ಲಿ ಅವನು ಜ್ಞಾನಿಯಾದಾನು.
ತನ್ನ ಸ್ವಂತ ಅಭಿಪ್ರಾಯದಲ್ಲಿ ಐಶ್ವರ್ಯ ವಂತನು ಜ್ಞಾನಿಯಾಗಿದ್ದಾನೆ; ವಿವೇಕಿಯಾದ ಬಡವನು ಅವನನ್ನು ಪರೀಕ್ಷಿಸುತ್ತಾನೆ.
ತನ್ನ ಮಾತುಗಳಲ್ಲಿ ದುಡುಕುವವನನ್ನು ನೀನು ನೋಡಿದ್ದೀಯೋ? ಅವನಿಗಿಂತಲೂ ಬುದ್ದಿಹೀನನ ವಿಷಯ ದಲ್ಲಿ ಹೆಚ್ಚು ನಿರೀಕ್ಷೆ ಇದೆ.
ಈ ಇಬ್ಬರಲ್ಲಿ ಯಾವನು ತನ್ನ ತಂದೆಯ ಇಷ್ಟದಂತೆ ಮಾಡಿದನು ಎಂದು ಕೇಳಲು ಅವರು ಆತನಿಗೆ--ಮೊದಲನೆಯವನು ಅಂದರು. ಆಗ ಯೇಸು ಅವರಿಗೆ --ಸುಂಕದವರೂ ಸೂಳೆಯರೂ ನಿಮಗಿಂತ ಮೊದಲು ದೇವರರಾಜ್ಯದೊಳಗೆ ಸೇರುವರೆಂದು ನಿಮಗೆ ನಿಜವಾಗಿ ಹೇಳುತ್ತೇನೆ.
ಫರಿಸಾಯನು ನಿಂತುಕೊಂಡು ತನ್ನೊಳಗೆ ಹೀಗೆ ಪ್ರಾರ್ಥಿಸುತ್ತಾ--ದೇವರೇ, ಸುಲು ಕೊಳ್ಳುವವರೂ ಅನೀತಿವಂತರೂ ವ್ಯಭಿಚಾರಿಗಳೂ ಆಗಿರುವ ಮಿಕ್ಕಾದವರಂತೆ ಇಲ್ಲವೆ ಈ ಸುಂಕದವನ ಹಾಗೆ ನಾನು ಅಲ್ಲ, ಆದದರಿಂದ ನಾನು ನಿನಗೆ ಸ್ತೋತ್ರ ಸಲ್ಲಿಸುತ್ತೇನೆ.
ಯಾವನೂ ತನ್ನನ್ನು ತಾನೇ ಮೋಸಗೊಳಿಸ ದಿರಲಿ; ನಿಮ್ಮಲ್ಲಿ ಯಾವನಾದರೂ ಈ ಲೋಕ ಸಂಬಂಧವಾಗಿ ಜ್ಞಾನಿಯಾಗಿದ್ದೇನೆಂದು ಭಾವಿಸಿ ಕೊಂಡರೆ ಜ್ಞಾನಿಯಾಗುವಂತೆ ಹುಚ್ಚನಾಗಲಿ.
ನೀನು--ನಾನು ಐಶ್ವರ್ಯವಂತನು, ಧನವೃದ್ಧಿಯುಳ್ಳವನು, ಯಾವದರ ಲ್ಲಿಯೂ ಕೊರತೆಯಿಲ್ಲದವನು ಎಂದು ಹೇಳಿಕೊಳ್ಳುತ್ತೀ; ಆದರೆ ನೀನು ಕೇವಲ ನಿರ್ಗತಿಕನು, ದರಿದ್ರನು, ಬಡವನು, ಕುರುಡನು, ಬೆತ್ತಲೆಯಾದವನು ಆಗಿರುವ ದನ್ನು ತಿಳಿಯದೆ ಇದ್ದೀ.