TSK

TSK · ಙ್ಞಾನೋಕ್ತಿಗಳು 27:8

Treasury of Scripture Knowledge references in Kannada KJV.

ಅಂಗೀಕಾರಕ್ಕೆ ಹಿಂತಿರುಗಿ

ಕಾಯಿನನು ಕರ್ತನ ಸನ್ನಿಧಿಯಿಂದ ಹೊರಟು ಏದೆನಿನ ಪೂರ್ವದಿಕ್ಕಿನಲ್ಲಿದ್ದ ನೋದು ಎಂಬ ದೇಶ ದಲ್ಲಿ ವಾಸಿಸಿದನು.

ಆದರೆ ಗಾದ್‌ ಪ್ರವಾದಿಯು ದಾವೀದನಿಗೆ--ನೀನು ಗವಿಯಲ್ಲಿರದೆ ಯೆಹೂದ ದೇಶಕ್ಕೆ ಹೊರಟು ಬಾ ಅಂದನು. ಆಗ ದಾವೀದನು ಹೊರಟು ಹೆರೆತ್‌ ಎಂಬ ಅರಣ್ಯಕ್ಕೆ ಬಂದನು.

ಫರೋಹನು ಅವನಿಗೆ -- ಯಾಕೆ? ಇಗೋ, ನೀನು ನಿನ್ನ ದೇಶಕ್ಕೆ ಹೋಗಬೇಕೆಂಬುವ ಹಾಗೆ ನೀನು ನನ್ನ ಸಂಗಡ ಇರುವಾಗ ನಿನಗೆ ಏನು ಕೊರತೆಯಾಯಿತು ಅಂದಾಗ ಅವನು--ಏನೂ ಇಲ್ಲ; ಆದರೆ ಹೇಗಾದರೂ ನಾನು ಅಲ್ಲಿಗೆ ಹೋಗುತ್ತೇನೆ ಅಂದನು.

ಅದಕ್ಕೆ ನಾನು--ನನ್ನಂಥಾ ಮನು ಷ್ಯನು ಓಡಿಹೋಗುವನೋ? ನನ್ನಂಥವನು ಬದುಕ ಬೇಕೆಂದು ಮಂದಿರದೊಳಕ್ಕೆ ಹೋಗುವವನಾರು? ನಾನು ಒಳಗೆ ಹೋಗುವದಿಲ್ಲ ಅಂದೆನು.

ವಿವೇ ಕದ ಮಾರ್ಗವನ್ನು ಬಿಟ್ಟು, ತಿರುಗುವವನು ಸತ್ತವರ ಕೂಟದಲ್ಲಿ ಇರುವಂಥವನಾಗಿದ್ದಾನೆ.

ಗೂಡಿನಿಂದ ಹೊರಗೆ ಬಂದ ಹಕ್ಕಿಗಳು ಅಲೆದಾಡುವ ಹಾಗೆ ಮೋವಾಬಿನ ಕುಮಾರ್ತೆಯರು ಅರ್ನೋನ್‌ ನದಿಯ ಹಾಯ್ಗಡಗಳಲ್ಲಿ ಇರುವರು.

ಆಗ ಆ ಮನುಷ್ಯರು ಬಹಳ ಭಯಪಟ್ಟು--ಇದನ್ನು ಯಾಕೆ ಮಾಡಿದ್ದೀ ಎಂದು ಅವನಿಗೆ ಹೇಳಿದರು, ಕರ್ತನ ಸಮ್ಮುಖದಿಂದ ಓಡಿ ಹೋಗುತ್ತಾನೆಂದು ಆ ಮನುಷ್ಯರಿಗೆ ತಿಳಿದಿತ್ತು; ಅವನು ಅವರಿಗೆ ಹೇಳಿದ್ದನು.

ಸ್ವಂತ ಅವಮಾನವೆಂಬ ನೊರೆಯನ್ನು ಕಾರುವ ಸಮುದ್ರದ ಹುಚ್ಚು ತೆರೆಗಳೂ ಆಗಿದ್ದಾರೆ. ಅಲೆಯುವ ನಕ್ಷತ್ರ ಗಳಾದ ಇವರ ಪಾಲಿಗೆ ಕಾರ್ಗತ್ತಲೆಯು ಸದಾಕಾಲ ಇಟ್ಟಿರುವದು.