TSK

TSK · ಙ್ಞಾನೋಕ್ತಿಗಳು 27:9

Treasury of Scripture Knowledge references in Kannada KJV.

ಅಂಗೀಕಾರಕ್ಕೆ ಹಿಂತಿರುಗಿ

ಇಪ್ಪೆಯ ಮರ ಅವುಗಳಿಗೆ--ಯಾವದರಿಂದ ದೇವರನ್ನೂ ಮನು ಷ್ಯರನ್ನೂ ಘನಪಡಿಸುತ್ತಾರೋ ಆ ನನ್ನ ಪುಷ್ಟಿಯನ್ನು ಬಿಟ್ಟು ಮರಗಳ ಮೇಲೆ ಅಧಿಕಾರಿಯಾಗಿ ಹೋಗುವೆನೋ ಅಂದಿತು.

ಆದದರಿಂದ ನೀನು ನಿನ್ನ ಪ್ರಾಣವನ್ನೂ ನಿನ್ನ ಮಗ ನಾದ ಸೊಲೊಮೋನನ ಪ್ರಾಣವನ್ನೂ ರಕ್ಷಿಸಿಕೊಳ್ಳುವ ಹಾಗೆ ಅಪ್ಪಣೆಯಾದರೆ ನಿನಗೆ ಆಲೋಚನೆ ಹೇಳು ತ್ತೇನೆ.

ನನ್ನ ವೈರಿಗಳ ಎದುರಿನಲ್ಲಿ ನನ್ನ ಮುಂದೆ ಮೇಜನ್ನು ಸಿದ್ಧಮಾಡುತ್ತೀ; ನೀನು ನನ್ನ ತಲೆಯನ್ನು ಎಣ್ಣೆಯಿಂದ ಅಭಿಷೇಕಿಸುತ್ತೀ; ನನ್ನ ಪಾತ್ರೆಯು ತುಂಬಿ ಹೊರಸೂಸುತ್ತದೆ.

ದ್ರಾಕ್ಷಾರಸವು ಮನುಷ್ಯನ ಹೃದಯವನ್ನು ಸಂತೋಷ ಪಡಿಸುತ್ತದೆ; ಎಣ್ಣೆಯು ಅವನ ಮುಖವನ್ನು ಪ್ರಕಾ ಶಿಸುವಂತೆ ಮಾಡುತ್ತದೆ; ರೊಟ್ಟಿಯು ಮನುಷ್ಯನ ಹೃದಯವನ್ನು ಬಲಪಡಿಸುತ್ತದೆ.

ರಕ್ತಬೋಳ ಅಗರು ಲವಂಗ ಚೆಕ್ಕೆಗಳಿಂದ ನನ್ನ ಹಾಸಿಗೆಯನ್ನು ಸುವಾಸನೆ ಗೊಳಿಸಿದ್ದೇನೆ.

ಹೃದಯದಲ್ಲಿ ಜ್ಞಾನ ವಂತರು ಜಾಣರೆಂದು ಕರೆಯಲ್ಪಡುವರು; ತುಟಿಗಳ ಮಧುರವು ಜ್ಞಾನವನ್ನು ಹೆಚ್ಚಿಸುತ್ತದೆ.

ಮನೋಹರವಾದ ಮಾತುಗಳು ಜೇನು ತುಪ್ಪದಂತೆ ಪ್ರಾಣಕ್ಕೆ ಮಧುರವೂ ಎಲುಬು ಗಳಿಗೆ ಕ್ಷೇಮವೂ ಆಗಿವೆ.

ರಕ್ತಬೋಳ ಸಾಂಬ್ರಾಣಿಗಳಿಂದಲೂ ವರ್ತಕರ ಸಕಲ ಸುಗಂಧ ದ್ರವ್ಯಗಳಿಂದಲೂ ಧೂಮ ಸ್ತಂಭ ಗಳ ಹಾಗೆಯೂ ಅಡವಿಯಿಂದ ಬರುವ ಇವಳಾರು?

ಆಗ ಮರಿಯಳು ಬಹು ಬೆಲೆಯುಳ್ಳ ಅಚ್ಚ ಜಟಾಮಾಂಸಿ ತೈಲವನ್ನು ಒಂದು ಸೇರಷ್ಟು ತಂದು ಯೇಸುವಿನ ಪಾದಕ್ಕೆ ಹಚ್ಚಿ ತನ್ನ ತಲೆಯ ಕೂದಲಿನಿಂದ ಆತನ ಪಾದಗಳನ್ನು ಒರಸಿದಳು; ಆ ತೈಲದ ಪರಿ ಮಳವು ಮನೆಯಲ್ಲಿ ತುಂಬಿಕೊಂಡಿತ್ತು.

ರಕ್ಷಣೆ ಹೊಂದಿದವರಲ್ಲಿಯೂ ನಾಶವಾಗುವವರಲ್ಲಿಯೂ ನಾವು ದೇವರಿಗಾಗಿ ಕ್ರಿಸ್ತನ ಪರಿಮಳವಾಗಿದ್ದೇವೆ.