TSK

TSK · ಙ್ಞಾನೋಕ್ತಿಗಳು 29:16

Treasury of Scripture Knowledge references in Kannada KJV.

ಅಂಗೀಕಾರಕ್ಕೆ ಹಿಂತಿರುಗಿ

ಕರ್ತನನ್ನು ನಿರೀಕ್ಷಿಸು, ಆತನ ಮಾರ್ಗವನ್ನು ಕೈಕೊಳ್ಳು; ಆಗ ಭೂಮಿಯನ್ನು ಸ್ವಾಧೀ ನಮಾಡಿಕೊಳ್ಳುವ ಹಾಗೆ ನಿನ್ನನ್ನು ಆತನು ಎತ್ತು ವನು; ದುಷ್ಟರು ಕಡಿದುಹಾಕಲ್ಪಟ್ಟಾಗ ನೀನು ಅದನ್ನು ನೋಡುವಿ.

ಮುಯ್ಯಿಗೆಮುಯ್ಯಿ ಆಗುವದನ್ನು ನೀತಿವಂತನು ದೃಷ್ಟಿಸುವಾಗ ಅವನು ಸಂತೋಷ ಪಡುವನು; ಅವನು ತನ್ನ ಪಾದಗಳನ್ನು ದುಷ್ಟರ ರಕ್ತ ದಲ್ಲಿ ತೊಳೆಯುವನು.

ಇಗೋ, ಓ ಕರ್ತನೇ, ನಿನ್ನ ಶತ್ರು ಗಳು, ಓ ಕರ್ತನೇ, ಇಗೋ, ನಿನ್ನ ಶತ್ರುಗಳು ನಾಶವಾಗುವರು; ಅಕ್ರಮ ಮಾಡುವವರೆಲ್ಲರು ಚದರಿ ಹೋಗುವರು.

ಅವನ ಹೃದಯವು ದೃಢವಾಗಿದೆ; ತನ್ನ ವೈರಿಗಳ ಮೇಲೆ ತನ್ನ ಇಷ್ಟವನ್ನು ನೋಡುವ ಮಟ್ಟಿಗೂ ಭಯಪಡನು.

ಓ ಕರ್ತನೇ, ನಿನಗೆ ಭಯಪಡದವರೂ ನಿನ್ನ ನಾಮವನ್ನು ಮಹಿಮೆಪಡಿಸದವರೂ ಯಾರಿ ದ್ದಾರೆ? ಯಾಕಂದರೆ ನೀನೊಬ್ಬನೇ ಪರಿಶುದ್ಧನು; ನಿನ್ನ ತೀರ್ಪುಗಳು ಪ್ರಕಟವಾದದ್ದರಿಂದ ಎಲ್ಲಾ ಜನಾಂಗ ಗಳು ಬಂದು ನಿನ್ನ ಸನ್ನಿಧಾನದಲ್ಲಿ ಆರಾಧಿಸುವರು ಎಂದು ಹೇಳಿದರು.