TSK

TSK · ಙ್ಞಾನೋಕ್ತಿಗಳು 3:23

Treasury of Scripture Knowledge references in Kannada KJV.

ಅಂಗೀಕಾರಕ್ಕೆ ಹಿಂತಿರುಗಿ

ದೇವರ ನ್ಯಾಯ ಪ್ರಮಾ ಣವು ಅವನ ಹೃದಯದಲ್ಲಿ ಅದೆ; ಅವನ ಹೆಜ್ಜೆಗಳು ಕದಲುವದಿಲ್ಲ.

ನಿನ್ನ ಪಾದವು ಕಲ್ಲಿಗೆ ತಗಲದ ಹಾಗೆ ಅವರು ನಿನ್ನನ್ನು ತಮ್ಮ ಕೈಗಳಲ್ಲಿ ಎತ್ತಿಕೊಳ್ಳುವರು.

ಕರ್ತನು ನಿನ್ನ ಹೋಗೋಣವನ್ನೂ ಬರೋಣವನ್ನೂ ಇಂದಿನಿಂದ ಸದಾಕಾಲವೂ ಕಾಪಾಡುವನು.

ನೀನು ನಡೆಯುವಾಗ ನಿನ್ನ ಹೆಜ್ಜೆಗೆ ಇಕ್ಕಟ್ಟಾಗದು; ನೀನು ಓಡುವಾಗ ಮುಗ್ಗರಿಸುವದಿಲ್ಲ.

ಯಥಾರ್ಥವಾಗಿ ನಡೆಯುತ್ತಿರುವವನು ದೃಢವಾಗಿ ನಡೆಯುತ್ತಾನೆ; ತನ್ನ ಮಾರ್ಗಗಳನ್ನು ಡೊಂಕು ಮಾಡು ತ್ತಿರುವವನು ಬಯಲಿಗೆ ಬರುವನು.