ಇದಲ್ಲದೆ ಸ್ತಂಭವಾಗಿ ನಾನು ನಿಲ್ಲಿಸಿದ ಈ ಕಲ್ಲು ದೇವರ ಮನೆಯಾಗಿರುವದು. ಆಗ ನೀನು ನನಗೆ ಕೊಡುವದ ರಲ್ಲೆಲ್ಲಾ ಹತ್ತರಲ್ಲಿ ಒಂದು ಭಾಗವನ್ನು ನಿನಗೆ ನಾನು ಖಂಡಿತವಾಗಿ ಕೊಡುವೆನು ಅಂದನು.
TSK
TSK · ಙ್ಞಾನೋಕ್ತಿಗಳು 3:9
Treasury of Scripture Knowledge references in Kannada KJV.
ನಿನ್ನ ಹೊಲದಲ್ಲಿ ಬಿತ್ತಿದ ಬೆಳೆಯ ಪ್ರಥಮ ಫಲಗಳ ಸುಗ್ಗಿ ಹಬ್ಬವನ್ನೂ ನಿನ್ನ ಬೆಳೆಯನ್ನು ಹೊಲದಿಂದ ಕೂಡಿಸಿದ ಮೇಲೆ ವರುಷದ ಅಂತ್ಯದಲ್ಲಿ ಕೂಡಿಸುವ ಹಬ್ಬವನ್ನೂ ಆಚರಿಸಬೇಕು.
ನಿಮ್ಮ ಭೂಮಿಯ ಪ್ರಥಮ ಫಲಗಳಲ್ಲಿ ಮೊದಲ ನೆಯದನ್ನು ನಿಮ್ಮ ದೇವರಾದ ಕರ್ತನ ಮನೆಗೆ ತರ ಬೇಕು. ಮೇಕೆಯ ಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬಾರದು ಎಂದು ಹೇಳಿದನು.
ಐದನೆಯ ವರುಷ ದಲ್ಲಿ ಅದು ನಿಮಗೆ ಇನ್ನೂ ಸಮೃದ್ಧಿಯಾಗಿ ಫಲಿಸು ವಂತೆ ನೀವು ಅದರ ಫಲವನ್ನು ತಿನ್ನಬೇಕು; ನಿಮ್ಮ ದೇವರಾಗಿರುವ ಕರ್ತನು ನಾನೇ.
ನಿಮ್ಮ ಪ್ರಥಮ ಹಿಟ್ಟಿನ ರೊಟ್ಟಿಯನ್ನೂ ಎತ್ತುವ ಅರ್ಪಣೆ ಯನ್ನೂ ಅರ್ಪಿಸಬೇಕು. ನಿಮ್ಮ ಕಣದಿಂದ ಎತ್ತುವ ಅರ್ಪಣೆಯಂತೆ ಅದನ್ನು ಎತ್ತಬೇಕು.
ಆಗ (ನಿನ್ನ ಸಂಗಡ ಪಾಲನ್ನೂ ಸ್ವಾಸ್ತ್ಯವನ್ನೂ ಹೊಂದದ) ಲೇವಿಯನೂ ನಿನ್ನ ಬಾಗಲು ಗಳಲ್ಲಿರುವ ಅನ್ಯದೇಶದವನೂ ದಿಕ್ಕಿಲ್ಲದವನೂ ವಿಧ ವೆಯೂ ಬಂದು ನಿನ್ನ ದೇವರಾದ ಕರ್ತನು ನಿನ್ನನ್ನು ನೀನು ಮಾಡುವ ಎಲ್ಲಾ ಕೈಕೆಲಸದಲ್ಲಿ ಆಶೀರ್ವದಿಸುವ ಹಾಗೆ ತಿಂದು ತೃಪ್ತರಾಗಲಿ.
ಚಾದೋಕನ ಮನೆಯವನಾಗಿರುವ ಪ್ರಧಾನ ಯಾಜಕನಾದ ಅಜರ್ಯನು ಅವನಿಗೆ -- ಕರ್ತನ ಮನೆಗೆ ಕಾಣಿಕೆಗಳನ್ನು ತರಲು ಆರಂಭಿಸಿದಂದಿನಿಂದ ನಿಮಗೆ ತಿನ್ನುವದಕ್ಕೆ ಸಂಪೂರ್ಣವಿತ್ತು; ಉಳಿದದ್ದು ಬಹಳವಾಯಿತು; ಯಾಕಂದರೆ ಕರ್ತನು ತನ್ನ ಜನ ರನ್ನು ಆಶೀರ್ವದಿಸಿದ್ದಾನೆ. ಆದದರಿಂದ ಉಳಿದದ್ದು ಈ ರಾಶಿಯಾಯಿತು ಎಂದು ಹೇಳಿದನು.
ಈ ಮನೆ ಹಾಳಾಗಿರಲಾಗಿ ನೀವು ನಿಮ್ಮ ಚಿತ್ರ ಹಲಗೆಗಳುಳ್ಳ ಮನೆಗಳಲ್ಲಿ ವಾಸಮಾಡುವದಕ್ಕೆ ಇದು ನಿಮಗೆ ಸಮಯವೋ?
ಅದೇ ಪ್ರಕಾರ ಎರಡು ಹೊಂದಿದವನು ಸಹ ಬೇರೆ ಎರಡನ್ನು ಸಂಪಾದಿಸಿದನು.
ಆಗ ಹನ್ನೆರಡು ಮಂದಿಯಲ್ಲಿ ಒಬ್ಬನಾದ ಯೂದ ಇಸ್ಕರಿಯೋತನು ಯೇಸುವನ್ನು ಪ್ರಧಾನ ಯಾಜಕರಿಗೆ ಹಿಡುಕೊಡುವಂತೆ ಅವರ ಬಳಿಗೆ ಹೋದನು.
ನಾನು ಬಂದಾಗ (ಹಣ) ಕೂಡಿಸುವದು ಇರದಂತೆ ದೇವರು ಅಭಿವೃದ್ಧಿ ಪಡಿಸಿದ ಪ್ರಕಾರ ವಾರದ ಮೊದಲನೆಯ ದಿನದಲ್ಲಿ ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ಹತ್ತಿರ ಕೂಡಿಟ್ಟುಕೊಳ್ಳಲಿ.
ನಾನು ಇದನ್ನು ಆಜ್ಞೆಯಂತೆ ಹೇಳದೆ ಇತರರ ಆಸಕ್ತಿಯನ್ನು ತೋರಿಸಿಕೊಟ್ಟು ನಿಮ್ಮ ಪ್ರೀತಿಯು ಯಥಾರ್ಥವಾದದ್ದೆಂಬದನ್ನು ಸಿದ್ಧಾಂತಪಡಿಸುವದ ಕ್ಕಾಗಿಯೇ ಹೇಳುತ್ತೇನೆ.
ಆದರೆ ಈ ಲೋಕದ ಸಂಪತ್ತುಳ್ಳ ಯಾವನಾದರೂ ಕೊರತೆಯಲ್ಲಿರುವ ತನ್ನ ಸಹೋದರನನ್ನು ನೋಡಿ ಕರುಣಿಸದೆ ಬಿಟ್ಟರೆ ದೇವರ ಪ್ರೀತಿಯು ಅವನಲ್ಲಿ ನೆಲೆಗೊಂಡಿರುವದು ಹೇಗೆ?