TSK

TSK · ಙ್ಞಾನೋಕ್ತಿಗಳು 4:7

Treasury of Scripture Knowledge references in Kannada KJV.

ಅಂಗೀಕಾರಕ್ಕೆ ಹಿಂತಿರುಗಿ

ನಾನು ಈ ಜನರ ಮುಂದೆ ಹೊರಡುವ ಹಾಗೆಯೂ ಬರುವ ಹಾಗೆಯೂ ನನಗೆ ಜ್ಞಾನವನ್ನೂ ತಿಳುವಳಿಕೆಯನ್ನೂ ಕೊಡು. ಈ ನಿನ್ನ ಮಹಾಜನಕ್ಕೆ ನ್ಯಾಯ ತೀರಿಸತಕ್ಕವನು ಯಾರು ಅಂದನು.

ನಾನು ನಿನ್ನ ಕಟ್ಟಳೆಗಳಿಂದ ವಿವೇಕಿ ಯಾಗಿದ್ದೇನೆ. ಆದದರಿಂದ ಮೋಸದ ಮಾರ್ಗಗ ಳನ್ನೆಲ್ಲಾ ಹಗೆಮಾಡಿದ್ದೇನೆ.

ಬಂಗಾರಕ್ಕಿಂತ ಜ್ಞಾನವನ್ನು ಪಡೆಯುವದು ಎಷ್ಟೋ ಮೇಲು! ಬೆಳ್ಳಿಗಿಂತ ವಿವೇಕವನ್ನು ಆರಿಸಿಕೊಳ್ಳುವದು ಎಷ್ಟೋ ಉತ್ತಮ.

ಸತ್ಯವನ್ನೂ ಜ್ಞಾನ ವನ್ನೂ ಶಿಕ್ಷೆಯನ್ನೂ ವಿವೇಕವನ್ನೂ ಕೊಂಡು ಅವುಗ ಳನ್ನು ಮಾರಬೇಡ.

ಎರಡನೆಯವನಿಲ್ಲದ ಒಬ್ಬೊಂಟಿಗನು ಒಬ್ಬನಿದ್ದಾನೆ; ಹೌದು, ಅವನಿಗೆ ಮಗುವಾಗಲೀ ಸಹೋದರನಾಗಲೀ ಇಲ್ಲ; ಆದರೂ ಅವನ ಪ್ರಯಾಸಕ್ಕೆ ಕೊನೆಯಿಲ್ಲ. ಅಲ್ಲದೆ ಐಶ್ವರ್ಯ ದಿಂದ ಅವನ ಕಣ್ಣು ತೃಪ್ತಿಹೊಂದದು; ಮಾತ್ರವಲ್ಲದೆ ಅವನು--ನಾನು ಯಾರಿಗೋಸ್ಕರ ಕಷ್ಟಪಟ್ಟು ಪ್ರಾಣ ವನ್ನು ಅದಕ್ಕೆ ಸುಖವಿಲ್ಲದ ಹಾಗೆ ಕೊರೆತೆಪಡಿಸು ತ್ತೇನೆ; ಎಂದು ಅವನು ಅಂದುಕೊಳ್ಳುವನು. ಇದು ಕೂಡ ವ್ಯರ್ಥವೇ; ಹೌದು, ವ್ಯಥೆಯಿಂದಾದ ಪ್ರಯಾಸವೇ.

ಆ ಮೇಲೆ ನಾನು--ಜ್ಞಾನವು ಬಲಕ್ಕಿಂತ ಉತ್ತಮವಾದದ್ದಾಗಿ ದ್ದಾಗ್ಯೂ ಬಡವನ ಜ್ಞಾನವು ತಿರಸ್ಕರಿಸಲ್ಪಟ್ಟದ್ದಾಗಿದ್ದು ಅವನ ಮಾತುಗಳನ್ನು ಯಾರೂ ಲಕ್ಷಿಸುವದಿಲ್ಲ ಎಂದು ಅಂದುಕೊಂಡೆನು.

ಒಬ್ಬ ಮನುಷ್ಯನು ಲೋಕವನ್ನೆಲ್ಲಾ ಸಂಪಾದಿಸಿ ಕೊಂಡರೂ ತನ್ನ ಸ್ವಂತ ಆತ್ಮವನ್ನು ನಷ್ಟಪಡಿಸಿಕೊಂಡರೆ ಅವನಿಗೆ ಲಾಭವೇನು?

ಆದರೆ ದೇವರು ಅವನಿಗೆ--ಬುದ್ಧಿಹೀನನೇ, ಈ ರಾತ್ರಿಯೇ ನಿನ್ನ ಪ್ರಾಣವು ನಿನ್ನಿಂದ ಕೇಳಲ್ಪಡುವದು; ಆಗ ನೀನು ಕೂಡಿಸಿಕೊಂಡವುಗಳು ಯಾರಿಗಾಗುವವು ಎಂದು ಹೇಳಿದನು.