TSK

TSK · ಙ್ಞಾನೋಕ್ತಿಗಳು 5:21

Treasury of Scripture Knowledge references in Kannada KJV.

ಅಂಗೀಕಾರಕ್ಕೆ ಹಿಂತಿರುಗಿ

ಈಗ ನನ್ನ ಹೆಜ್ಜೆಗಳನ್ನು ಎಣಿಕೆ ಮಾಡುತ್ತೀ; ನೀನು ನನ್ನ ಪಾಪವನ್ನು ನೋಡಿ ಕೊಳ್ಳುತ್ತೀಯಲ್ಲವೋ?

ಆತನು ನನ್ನ ಮಾರ್ಗಗಳನ್ನು ನೋಡಿ, ನನ್ನ ಹೆಜ್ಜೆಗಳನ್ನೆಲ್ಲಾ ಎಣಿಸುವಾತನಲ್ಲವೋ?

ಕರ್ತನು ತನ್ನ ಪರಿಶುದ್ಧ ಮಂದಿರದಲ್ಲಿ ಇದ್ದಾನೆ; ಕರ್ತನ ಸಿಂಹಾಸನವು ಪರಲೋಕದಲ್ಲಿ ಅದೆ; ಆತನ ಕಣ್ಣುಗಳು ದೃಷ್ಟಿಸುತ್ತವೆ; ಆತನ ರೆಪ್ಪೆಗಳು ಮನು ಷ್ಯನ ಮಕ್ಕಳನ್ನು ಶೋಧಿಸುತ್ತವೆ;

ನಿನ್ನ ಕಟ್ಟಳೆ ಗಳನ್ನೂ ಸಾಕ್ಷಿಗಳನ್ನೂ ಕೈಕೊಳ್ಳುತ್ತೇನೆ; ನನ್ನ ಮಾರ್ಗ ಗಳೆಲ್ಲಾ ನಿನ್ನ ಮುಂದೆ ಇವೆ.

ನಾನು ನಡೆಯುವದನ್ನೂ ಮಲಗುವದನ್ನೂ ನೀನು ಶೋಧಿಸಿದ್ದೀ; ನನ್ನ ಮಾರ್ಗಗಳೆಲ್ಲಾ ನಿನಗೆ ಗೊತ್ತಾಗಿವೆ.

ನನ್ನ ಕಣ್ಣುಗಳು ಅವರ ಎಲ್ಲಾ ಮಾರ್ಗಗಳ ಮೇಲೆ ಅವೆ; ಅವು ನನ್ನ ಮುಖಕ್ಕೆ ಮರೆಯಾದವುಗಳಲ್ಲ ಇಲ್ಲವೆ ಅವರ ಅಕ್ರಮವು ನನ್ನ ಕಣ್ಣುಗಳಿಗೆ ಅಡಗಿರು ವದಿಲ್ಲ;

ನಾನು ಅವನನ್ನು ನೋಡದ ಹಾಗೆ ಒಬ್ಬನು ಮರೆಯಾದ ಸ್ಥಳಗಳಲ್ಲಿ ತನ್ನನ್ನು ಅಡಗಿಸಿಕೊ ಳ್ಳಬಹುದೋ ಎಂದು ಕರ್ತನು ಅನ್ನುತ್ತಾನೆ; ನಾನು ಆಕಾಶದಲ್ಲಿಯೂ ಭೂಮಿಯಲ್ಲಿಯೂ ವ್ಯಾಪಿಸಿರುವವ ನಲ್ಲವೋ? ಎಂದು ಕರ್ತನು ಅನ್ನುತ್ತಾನೆ.

ನಾನು ಅವರ ಕೆಟ್ಟತನವನ್ನೆಲ್ಲಾ ಜ್ಞಾಪಕಮಾಡು ತ್ತೇನೆಂದು ಅವರು ತಮ್ಮ ಹೃದಯಗಳಲ್ಲಿ ನೆನಸಿಕೊಳ್ಳು ವದಿಲ್ಲ; ಈಗ ಅವರ ಸ್ವಂತ ಕೃತ್ಯಗಳು ಅವರನ್ನು ಸುತ್ತಿಕೊಂಡಿವೆ; ಅವು ನನ್ನ ಮುಖದ ಮುಂದೆ ಇವೆ.

ಥುವತೈರದಲ್ಲಿರುವ ಸಭೆಯ ದೂತನಿಗೆ ಬರೆ: ಬೆಂಕಿಯ ಉರಿಯಂತಿರುವ ಕಣ್ಣುಗಳೂ ಶುದ್ಧವಾದ ತಾಮ್ರದಂತಿರುವ ಪಾದಗಳುಳ್ಳ ದೇವಕುಮಾರನು ಹೇಳುವವುಗಳು ಯಾವವೆಂದರೆ,