ದುಷ್ಟನು ತನ್ನ ಹೃದಯದ ಆಶೆಗೋಸ್ಕರ ಹೊಗಳಿಕೊಳ್ಳುತ್ತಾನೆ; ಕರ್ತನು ಅಸಹ್ಯಪಡುವ ಲೋಭಿಯನ್ನು ಅವನು ಆಶೀರ್ವದಿಸುತ್ತಾನೆ.
TSK
TSK · ಙ್ಞಾನೋಕ್ತಿಗಳು 6:12
Treasury of Scripture Knowledge references in Kannada KJV.
ಅವನ ಬಾಯಿಯ ಮಾತುಗಳು ಅಕ್ರಮವೂ ಮೋಸವೂ ಆಗಿವೆ; ಬುದ್ಧಿ ಯಿಂದ ನಡೆಯುವದನ್ನೂ ಒಳ್ಳೇದು ಮಾಡುವದನ್ನೂ ಬಿಟ್ಟಿದ್ದಾನೆ.
ಇಗೋ, ತಮ್ಮ ಬಾಯಿಯಿಂದ ಕಕ್ಕುತ್ತಾರೆ; ಅವರ ತುಟಿಗಳಲ್ಲಿ ಕತ್ತಿಗಳು ಅವೆ; ಅವರು--ಕೇಳುವವನಾರು ಎಂದು ಅನ್ನುತ್ತಾರೆ.
ಕೆಟ್ಟ ಕಾರ್ಯ ವನ್ನು ನನ್ನ ಕಣ್ಣುಗಳ ಮುಂದೆ ನಾನು ಇಡುವದಿಲ್ಲ; ಅಕ್ರಮಗಾರರ ಕೆಲಸವನ್ನು ಹಗೆ ಮಾಡುತ್ತೇನೆ; ಅದು ನನಗೆ ಅಂಟಿಕೊಳ್ಳದು.
ವಕ್ರ ಬುದ್ಧಿಯವನು ಕರ್ತನಿಗೆ ಅಸಹ್ಯನಾಗಿದ್ದಾನೆ; ಆದರೆ ಆತನ ಗುಟ್ಟು ನೀತಿವಂತರೊಂದಿಗೆ ಇದೆ.
ಅವನ ಹೃದಯದಲ್ಲಿ ಮೂರ್ಖ ತನವಿದೆ. ಯಾವಾಗಲೂ ಅವನು ಕೇಡನ್ನು ಕಲ್ಪಿಸು ತ್ತಾನೆ. ಅವನು ವೈಷಮ್ಯವನ್ನು ಬಿತ್ತುತ್ತಾನೆ.
ಯಥಾರ್ಥವಂತರ ನೀತಿಯು ಅವರನ್ನು ಬಿಡಿಸುವದು; ತಮ್ಮ ಸ್ವಂತ ತುಂಟ ತನದಲ್ಲಿ ದೋಷಿಗಳು ಸಿಕ್ಕಿಬೀಳುವರು.
ವಕ್ರ ಬುದ್ಧಿಯ ಒಳಸಂಚುಗಳಿಗೆ ಅವನು ತನ್ನ ಕಣ್ಣುಗಳನ್ನು ಮುಚ್ಚಿಕೊಳ್ಳುತ್ತಾನೆ; ತನ್ನ ತುಟಿಗಳನ್ನು ಕದಲಿಸುತ್ತಾ ಕೆಟ್ಟದ್ದು ಸಂಭವಿಸುವಂತೆ ಮಾಡುತ್ತಾನೆ.
ಒಂದು ಪುಟ್ಟಿಯಲ್ಲಿ ಬಹಳ ಒಳ್ಳೇ ಹಣ್ಣುಗಳು ಮೊದಲು ಮಾಗುವ ಹಣ್ಣುಗಳ ಹಾಗೆ ಇರುವವುಗಳೂ ಮತ್ತೊಂದು ಪುಟ್ಟಿಯಲ್ಲಿ ಬಹಳ ಕೆಟ್ಟ ಹಣ್ಣುಗಳು, ತಿನ್ನಕೂಡದ ಹಾಗೆ ಅಷ್ಟು ಕೆಟ್ಟವುಗಳೂ ಇದ್ದವು.
ಓ ಸರ್ಪಸಂತತಿಯವರೇ, ಕೆಟ್ಟವರಾಗಿ ರುವ ನೀವು ಒಳ್ಳೆಯವುಗಳನ್ನು ಹೇಗೆ ಮಾತನಾಡೀರಿ? ಯಾಕಂದರೆ ಹೃದಯದಲ್ಲಿ ಸಮೃದ್ಧಿಯಾಗಿರುವದನ್ನೇ ಬಾಯಿ ಮಾತನಾಡುತ್ತದೆ.
ಇದಲ್ಲದೆ ಅವರು ಮನೆಯಿಂದ ಮನೆಗೆ ತಿರುಗಾಡುತ್ತಾ ಮೈಗಳ್ಳತನವನ್ನು ಕಲಿಯುತ್ತಾರೆ; ಮೈಗಳ್ಳರಾಗುವದ ಲ್ಲದೆ ಹರಟೆ ಮಾತನ್ನಾಡುವರು ಮತ್ತು ಇತರರ ಕೆಲಸ ದಲ್ಲಿ ಕೈಹಾಕುವವರಾಗಿ ಆಡಬಾರದ ಮಾತುಗಳನ್ನಾಡು ತ್ತಾರೆ.
ಆದಕಾರಣ ಎಲ್ಲಾ ಮಲಿನತೆಯನ್ನೂ ಎಲ್ಲಾ ದುಷ್ಟತನವನ್ನೂ ತೆಗೆದುಹಾಕಿ ಒಳಗೆ ಬೇರೂರಿರುವ ವಾಕ್ಯಕ್ಕೆ ನಮ್ರತೆ ಯಿಂದ ಎಡೆಕೊಡಿರಿ; ಅದು ನಿಮ್ಮ ಆತ್ಮಗಳನ್ನು ರಕ್ಷಿಸು ವದಕ್ಕೆ ಸಾಮರ್ಥ್ಯವುಳ್ಳದ್ದಾಗಿದೆ.