ಅಬ್ರಹಾಮನು ತನ್ನ ಹೆಂಡತಿಯಾದ ಸಾರಳ ವಿಷಯವಾಗಿ--ಅವಳು ನನ್ನ ತಂಗಿ ಎಂದು ಹೇಳಿ ದನು. ಆದದರಿಂದ ಗೆರಾರಿನ ಅರಸನಾದ ಅಬೀಮೆಲೆ ಕನು ಸಾರಳನ್ನು ಕರೆಯಿಸಿ ತೆಗೆದುಕೊಂಡನು.
TSK
TSK · ಙ್ಞಾನೋಕ್ತಿಗಳು 6:29
Treasury of Scripture Knowledge references in Kannada KJV.
ದೇವರು ಕನಸಿನಲ್ಲಿ ಅವನಿಗೆ--ಹೌದು, ನೀನು ಯಥಾರ್ಥವಾದ ಹೃದಯ ದಿಂದ ಇದನ್ನು ಮಾಡಿದ್ದೀ ಎಂದು ನನಗೂ ತಿಳಿದದೆ. ಆದದರಿಂದ ನೀನು ನನಗೆ ವಿರೋಧವಾಗಿ ಪಾಪಮಾಡದ ಹಾಗೆ ನಾನು ನಿನ್ನನ್ನು ತಡೆದು ಆಕೆಯನ್ನು ಮುಟ್ಟುವದಕ್ಕೆ ಬಿಡಲಿಲ್ಲ.
ಇದಲ್ಲದೆ ಅವಳಿಂದ ನಿನ್ನನ್ನು ಹೊಲೆಮಾಡಿ ಕೊಳ್ಳದಂತೆ ನಿನ್ನ ನೆರೆಯವನ ಹೆಂಡತಿಯೊಂದಿಗೆ ನೀನು ಸಂಗಮಿಸಬೇಡ.
ಆ ಸ್ತ್ರೀಯು ಮಹಾಸೌಂದರ್ಯ ರೂಪವುಳ್ಳವಳಾಗಿದ್ದಳು. ಆಗ ದಾವೀದನು ಆ ಸ್ತ್ರೀ ಯಾರೆಂದು ಕೇಳುವದಕ್ಕೆ--ಕಳುಹಿಸಿದಾಗ ಒಬ್ಬನು--ಅವಳು ಹಿತ್ತಿಯನಾದ ಊರೀಯನ ಹೆಂಡತಿಯಾಗಿರುವ ಎಲೀಯಾಮನ ಮಗಳಾದ ಬತ್ಷೆಬೆಯಲ್ಲವೋ ಅಂದನು.
ಇದು ಸಾಲದೆ ಇದ್ದರೆ ಇಂಥಿಂಥವುಗಳನ್ನು ನಿನಗೆ ಇನ್ನೂ ಕೊಡುತ್ತಿದ್ದೆನು. ನೀನು ಕರ್ತನ ದೃಷ್ಟಿಗೆ ಈ ಕೆಟ್ಟಕಾರ್ಯವನ್ನು ಮಾಡುವ ಹಾಗೆ ಆತನ ಆಜ್ಞೆ ಯನ್ನು ತಿರಸ್ಕರಿಸಿದ್ದೇನು? ನೀನು ಹಿತ್ತಿಯನಾದ ಊರೀಯನನ್ನು ಕತ್ತಿಯಿಂದ ಕೊಲ್ಲಿಸಿ ಅವನ ಹೆಂಡತಿ ಯನ್ನು ನಿನಗೆ ಹೆಂಡತಿಯಾಗಿ ತೆಗೆದುಕೊಂಡಿ; ಇದಲ್ಲದೆ ಅವನನ್ನು ಅಮ್ಮೋನನ ಮಕ್ಕಳ ಕತ್ತಿಯಿಂದ ಕೊಂದು ಹಾಕಿಸಿದಿ.
ಹೃದಯದಲ್ಲಿ ಗರ್ವಿಷ್ಠನಾದ ಪ್ರತಿಯೊಬ್ಬನೂ ಕರ್ತನಿಗೆ ಅಸಹ್ಯ. ಕೈಗೆ ಕೈ ಕೊಟ್ಟರೂ ದುಷ್ಟನು ಶಿಕ್ಷಿಸಲ್ಪಡದೆ ಇರುವದಿಲ್ಲ.
ಇವುಗಳ ನಿಮಿತ್ತ ನಾನು ವಿಚಾರಿಸುವ ದಿಲ್ಲವೋ? ಇಂಥಾ ಜನಾಂಗಕ್ಕೆ ನನ್ನ ಪ್ರಾಣವು ಮುಯ್ಯಿಗೆ ಮುಯ್ಯಿ ತೀರಿಸುವದಿಲ್ಲವೋ? ಎಂದು ಕರ್ತನು ಅನ್ನುತ್ತಾನೆ.
ನ್ಯಾಯಕ್ಕೋಸ್ಕರ ನಿಮ್ಮನ್ನು ನಾನು ಸವಿಾಪಿ ಸುತ್ತೇನೆ; ಆಗ ಕಣಿಹೇಳುವವರಿಗೂ ವ್ಯಭಿಚಾರಿ ಗಳಿಗೂ ಸುಳ್ಳು ಪ್ರಮಾಣಮಾಡುವವರಿಗೂ ಸಂಬಳ ದಲ್ಲಿ ಕೂಲಿಯವನಿಗೂ ವಿಧವೆಗೂ ದಿಕ್ಕಿಲ್ಲದವನಿಗೂ ಬಲಾತ್ಕಾರ ಮಾಡುವವರಿಗೂ ಅನ್ಯನ ನ್ಯಾಯವನ್ನು ತಿರಿಗಿಸಿ ಬಿಡುವವರಿಗೂ ನನಗೆ ಭಯಪಡದವರಿಗೂ ವಿರೋಧವಾಗಿ ಶೀಘ್ರವಾದ ಸಾಕ್ಷಿಗಾರನಾಗಿರು ವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.