TSK

TSK · ಙ್ಞಾನೋಕ್ತಿಗಳು 7:8

Treasury of Scripture Knowledge references in Kannada KJV.

ಅಂಗೀಕಾರಕ್ಕೆ ಹಿಂತಿರುಗಿ

ಆಗ ಆದದ್ದೇನಂದರೆ, ದಾವೀದನು ಒಂದು ದಿನ ಸಾಯಂಕಾಲದಲ್ಲಿ ತನ್ನ ಹಾಸಿಗೆಯಿಂದ ಎದ್ದು ಅರಮನೆಯ ಉಪ್ಪರಿಗೆಯ ಮೇಲೆ ತಿರುಗಾಡುತ್ತಾ ಇರುವಾಗ ಸ್ನಾನಮಾಡುತ್ತಿರುವ ಒಬ್ಬ ಸ್ತ್ರೀಯನ್ನು ಉಪ್ಪರಿಗೆಯ ಮೇಲಿನಿಂದ ನೋಡಿದನು.

ಅವಳ ಕಡೆಯಿಂದ ನಿನ್ನ ದಾರಿಯನ್ನು ದೂರಮಾಡು. ಅವಳ ಮನೆಯ ಬಾಗಲ ಹತ್ತಿರಕ್ಕೆ ಬಾರದೆ ಇರು.

ಜಾರತ್ವಕ್ಕೆ ದೂರವಾಗಿ ಓಡಿಹೋಗಿರಿ. ಮನುಷ್ಯರು ಮಾಡುವ ಇತರ ಪಾಪಕೃತ್ಯಗಳು ದೇಹಕ್ಕೆ ಹೊರತಾಗಿವೆ. ಆದರೆ ಜಾರತ್ವ ಮಾಡುವವನು ತನ್ನ ಸ್ವಂತ ದೇಹಕ್ಕೆ ವಿರೋಧವಾಗಿ ಪಾಪವನ್ನು ಮಾಡುತ್ತಾನೆ.

ಬೇರೆಯವರನ್ನು ಬೆಂಕಿಯಿಂದ ಎಳಕೊಂಡು ಭಯದಿಂದ ರಕ್ಷಿಸಿರಿ. ಶರೀರದಿಂದ ಮೈಲಿಗೆಯಾದ ಅಂಗಿಯನ್ನು ಹಗೆಮಾಡಿರಿ.