TSK

TSK · ಙ್ಞಾನೋಕ್ತಿಗಳು 8:36

Treasury of Scripture Knowledge references in Kannada KJV.

ಅಂಗೀಕಾರಕ್ಕೆ ಹಿಂತಿರುಗಿ

ಅವರು ತಮ್ಮ ಸ್ವಂತ ನಡತೆಯ ಫಲವನ್ನು ಅನುಭವಿಸಿ ತಮ್ಮ ಸ್ವಂತ ಕುಯುಕ್ತಿಗಳಿಂದಲೇ ತುಂಬಿಕೊಳ್ಳುವರು.

ಶಿಕ್ಷಣವನ್ನು ಪ್ರೀತಿಸುವವನು ತಿಳುವಳಿಕೆಯನ್ನು ಪ್ರೀತಿಸುವವನಾಗಿದ್ದಾನೆ; ಗದರಿಕೆ ಯನ್ನು ಹಗೆಮಾಡುವವನು ಪಶುಪ್ರಾಯನು.

ಅರಸನ ಭಯವು ಸಿಂಹದ ಗರ್ಜನೆಯಂತಿದೆ; ಅವನಿಗೆ ಕೋಪ ವನ್ನೆಬ್ಬಿಸುವವನು ತನ್ನ ಪ್ರಾಣಕ್ಕೆ ವಿರೋಧವಾಗಿ ಪಾಪ ಮಾಡುತ್ತಾನೆ.

ನೀವು ಮಾಡುವ ದುಷ್ಟತ್ವಗಳನ್ನೆಲ್ಲಾ ನಿಮ್ಮಿಂದ ಬಿಟ್ಟುಬಿಡಿರಿ; ಹೊಸ ಹೃದಯವನ್ನೂ ಹೊಸ ಆತ್ಮವನ್ನೂ ನೀವು ಪಡಕೊಳ್ಳಿರಿ; ಯಾಕಂದರೆ ಓ ಇಸ್ರಾಯೇಲಿನ ಮನೆತನದವರೇ, ನೀವು ಸಾಯುವದೇಕೆ?

ಆ ತೀರ್ಪು ಏನಂದರೆ, ಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕ್ರಿಯೆಗಳು ಕೆಟ್ಟವುಗಳಾ ಗಿರುವದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಪ್ರೀತಿ ಮಾಡಿದರು.

ಆಗ ಪೌಲನೂ ಬಾರ್ನಬನೂ ಧೈರ್ಯದಿಂದ ಮಾತನಾಡಿ--ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವದು ಅವಶ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪು ಮಾಡಿಕೊಂಡದ್ದರಿಂದ ಇಗೋ, ನಾವು ಅನ್ಯಜನರ ಕಡೆಗೆ ಹೋಗುತ್ತೇವೆ.

ಯಾವನಾದರೂ ಕರ್ತನಾದ ಯೇಸು ಕ್ರಿಸ್ತನನ್ನು ಪ್ರೀತಿಸದಿದ್ದರೆ ಅವನು ಅನಾಥಿಮ (ಶಾಪಗ್ರಸ್ತನಾಗಲಿ;) ಮಾರನಾಥ (ನಮ್ಮ ಕರ್ತನು ಬರುತ್ತಾನೆ).

ಯಾವನು ದೇವ ಕುಮಾರನನ್ನು ತುಳಿದು ತನ್ನನ್ನು ಪವಿತ್ರಮಾಡಿದಂಥ ಒಡಂಬಡಿಕೆಯ ರಕ್ತವನ್ನು ಅಶುದ್ಧವೆಂದೆಣಿಸಿ ಕೃಪೆಯ ಆತ್ಮನನ್ನು ತಿರಸ್ಕಾರ ಮಾಡಿದ್ದಾನೋ ಅವನು ಇನ್ನೂ ಎಷ್ಟೋ ಕ್ರೂರವಾದ ದಂಡನೆಗೆ ಪಾತ್ರನಾಗಬೇಕೆಂಬ ದನ್ನು ಯೋಚಿಸಿರಿ.