TSK

TSK · ಙ್ಞಾನೋಕ್ತಿಗಳು 8:4

Treasury of Scripture Knowledge references in Kannada KJV.

ಅಂಗೀಕಾರಕ್ಕೆ ಹಿಂತಿರುಗಿ

ಎಲ್ಲಾ ಜನರೇ, ಇದನ್ನು ಕೇಳಿರಿ; ಭೂಲೋಕದ ನಿವಾಸಿಗಳಿರಾ, ಕೇಳಿರಿ;

ಎಲ್ಲಾ ಜನಗಳೇ, ಕೇಳಿರಿ, ಭೂಮಿಯೇ, ಅದರ ಪರಿಪೂರ್ಣತೆಯೇ, ಕಿವಿಗೊಡಿರಿ; ಕರ್ತನಾದ ದೇವರು ತನ್ನ ಪರಿಶುದ್ಧ ಮಂದಿರದೊಳಗಿಂದ ಕರ್ತನು ನಿಮಗೆ ವಿರೋಧವಾಗಿ ಸಾಕ್ಷಿಯಾಗಿರಲಿ.

ದೇವರು ಲೋಕವನ್ನು ಎಷ್ಟೋ ಪ್ರೀತಿಮಾಡಿ ತನ್ನ ಒಬ್ಬನೇ ಮಗನನ್ನು ಕೊಟ್ಟನು; ಆತನನ್ನು ನಂಬುವ ಯಾವನಾದರೂ ನಾಶವಾಗದೆ ನಿತ್ಯಜೀವ ವನ್ನು ಪಡೆದವನಾಗಿರುವನು.

ಪೌಲನೆಂಬ ನಾನು ಈ ಸುವಾರ್ತೆಗೆ ಸೇವಕನಾದೆನು; ನೀವು ಕೇಳಿದಂಥ ಮತ್ತು ಆಕಾಶದ ಕೆಳಗಿರುವ ಸರ್ವಸೃಷ್ಟಿಗೆ ಸಾರಲ್ಪಟ್ಟಂಥ ಸುವಾರ್ತೆಯಿಂದ ಉಂಟಾದ ನಿರೀಕ್ಷೆ ಯನ್ನು ಬಿಟ್ಟು ತೊಲಗಿಹೋಗದೆ ಅಸ್ತಿವಾರದ ಮೇಲೆ ನಿಂತು ಸ್ಥಿರವಾಗಿದ್ದು ನಂಬಿಕೆಯಲ್ಲಿ ನೆಲೆಗೊಂಡಿರು ವದಾದರೆ

ಎಲ್ಲಾ ಮನುಷ್ಯರು ರಕ್ಷಣೆಯನ್ನು ಹೊಂದಿ ಸತ್ಯದ ಜ್ಞಾನಕ್ಕೆ ಸೇರ ಬೇಕೆಂಬದು ಆತನ ಚಿತ್ತವಾಗಿದೆ.

ಆತ್ಮನೂ ಮದಲಗಿತ್ತಿಯೂ--ಬಾ, ಅನ್ನುತ್ತಾರೆ. ಕೇಳುವವನು--ಬಾ, ಅನ್ನಲಿ. ಬಾಯಾರಿದವನು ಬರಲಿ. ಇಷ್ಟವುಳ್ಳವನು ಜೀವಜಲವನ್ನು ಉಚಿತವಾಗಿ ತೆಗೆದುಕೊಳ್ಳಲಿ.