ಇದಲ್ಲದೆ ಕರ್ತನು ನನಗೆ--ನಾನು ಈ ಜನವನ್ನು ನೋಡಿದ್ದೇನೆ; ಇಗೋ, ಇದು ಬಗ್ಗದ ಕುತ್ತಿಗೆಯುಳ್ಳ ಜನವೇ.
TSK
TSK · ರೋಮಾಪುರದವರಿಗೆ 10:21
Treasury of Scripture Knowledge references in Kannada KJV.
ಆಗ ಕರ್ತನು ಸಮು ವೇಲನಿಗೆ--ಜನರು ನಿನಗೆ ಹೇಳಿದ್ದೆಲ್ಲಾದರಲ್ಲಿ ಅವರ ಮಾತು ಕೇಳು. ಯಾಕಂದರೆ ಅವರು ನಿನ್ನನ್ನು ತೊರೆ ದಿಲ್ಲ; ನಾನು ಅವರನ್ನು ಆಳದ ಹಾಗೆ ನನ್ನನ್ನು ತೊರೆದಿದ್ದಾರೆ.
ನಾನು ಕರೆದಾಗ ನೀವು ತಿರಸ್ಕರಿಸಿದ್ದಕ್ಕಾಗಿಯೂ ನಾನು ನನ್ನ ಕೈಚಾಚಿದಾಗ ಯಾವ ಮನುಷ್ಯನು ಗಮನಿಸದೆ ಇದ್ದದ್ದಕ್ಕಾಗಿಯೂ
ಇದಲ್ಲದೆ ಕರ್ತನು ತನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ಕಳುಹಿಸಿದ್ದಾನೆ, ಬೆಳಿಗ್ಗೆ ಎದ್ದು ಕಳುಹಿಸಿದ್ದಾನೆ; ಆದರೆ ನೀವು ಕೇಳಲಿಲ್ಲ, ಕೇಳು ವದಕ್ಕೆ ನಿಮ್ಮ ಕಿವಿಗೊಡಲಿಲ್ಲ.
ಆದಾಗ್ಯೂ ನಾನು ನಿಮ್ಮ ಬಳಿಗೆ ನನ್ನ ಸೇವಕರಾದ ಪ್ರವಾದಿಗಳೆಲ್ಲರನ್ನು ಬೆಳಿಗ್ಗೆ ಎದ್ದು ಕಳುಹಿಸಿ--ಓ, ನಾನು ಹಗೆಮಾಡುವ ಈ ಅಸಹ್ಯವಾದ ಕಾರ್ಯವನ್ನು ಮಾಡಲೇ ಬೇಡಿರೆಂದು ಹೇಳಿದೆನು.
ಮತ್ತೊಂದು ಸಾಮ್ಯವನ್ನು ಕೇಳಿರಿ: ಒಬ್ಬ ಮನೇ ಯಜಮಾನನು ದ್ರಾಕ್ಷೇತೋಟವನ್ನು ನೆಟ್ಟು ಅದರ ಸುತ್ತಲೂ ಬೇಲಿಹಾಕಿ ಅದರೊಳಗೆ ತೊಟ್ಟಿಯನ್ನು ಅಗೆದು ಗೋಪುರವನ್ನು ಕಟ್ಟಿ ಒಕ್ಕಲಿಗರಿಗೆ ವಾರಕ್ಕೆ ಕೊಟ್ಟು ದೂರದೇಶಕ್ಕೆ ಹೋದನು.
ಆದದರಿಂದ ಇಗೋ, ನಾನು ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಶಾಸ್ತ್ರಿಗಳನ್ನೂ ನಿಮ್ಮ ಬಳಿಗೆ ಕಳುಹಿ ಸುತ್ತೇನೆ. ಅವರಲ್ಲಿ ಕೆಲವರನ್ನು ನೀವು ಕೊಂದು ಶಿಲುಬೆಗೆ ಹಾಕುವಿರಿ; ಮತ್ತು ಕೆಲವರನ್ನು ನೀವು ನಿಮ್ಮ ಸಭಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆದು ಅವ ರನ್ನು ಪಟ್ಟಣದಿಂದ ಪಟ್ಟಣಕ್ಕೆ ಅಟ್ಟಿ ಹಿಂಸಿಸ
ಬಗ್ಗದ ಕುತ್ತಿಗೆಯುಳ್ಳವರೇ, ಹೃದಯದಲ್ಲಿಯೂ ಕಿವಿಗಳಲ್ಲಿಯೂ ಸುನ್ನತಿಯಿಲ್ಲದವರೇ, ನಿಮ್ಮ ಪಿತೃಗಳು ಹೇಗೋ ಹಾಗೆಯೇ ನೀವು ಯಾವಾಗಲೂ ಪವಿತ್ರಾತ್ಮನನ್ನು ಎದುರಿಸುವವರಾಗಿದ್ದೀರಿ.
ಅನ್ಯ ಜನರಿಗೆ ರಕ್ಷಣೆಯಾಗುವಂತೆ ಸುವಾರ್ತೆಯನ್ನು ಹೇಳುವ ನಮಗೆ ಅವರು ಅಡ್ಡಿ ಮಾಡುತ್ತಾರೆ; ಹೀಗೆ ತಮ್ಮ ಪಾಪಗಳನ್ನು ಯಾವಾಗಲೂ ಪರಿಪೂರ್ಣ ಮಾಡುವದಕ್ಕೆ ಹೋಗುತ್ತಾರೆ; ಆದರೆ ದೇವರ ಕೋಪವು ಅವರ ಮೇಲೆ ಸಂಪೂರ್ಣವಾಗುತ್ತಾ ಬಂತು.