ಅಬ್ರಾ ಮನು ಕರ್ತನಲ್ಲಿ ನಂಬಿಕೆಯಿಟ್ಟನು. ಆತನು ಅದನ್ನು ಅವನಿಗೆ ನೀತಿ ಎಂದು ಎಣಿಸಿದನು.
TSK
TSK · ರೋಮಾಪುರದವರಿಗೆ 3:21
Treasury of Scripture Knowledge references in Kannada KJV.
ಕರ್ತನಲ್ಲಿ ಮಾತ್ರ ನನಗೆ ನೀತಿಯೂ ಬಲವೂ ಉಂಟೆಂದು ಮನುಷ್ಯರೂ ಸಹ ಆತನ ಬಳಿಗೆ ಬರುವರು; ಆತನ ಮೇಲೆ ಉರಿಗೊಂಡವ ರೆಲ್ಲರೂ ನಾಚಿಕೆಗೆ ಈಡಾಗುವರು ಎಂದು ಒಬ್ಬನು ನಿಶ್ಚಯವಾಗಿ ಹೇಳುತ್ತಾನೆ.
ನುಸಿಯು ಬಟ್ಟೆಯನ್ನು ತಿನ್ನುವಂತೆ ಅವರನ್ನು ತಿಂದುಬಿಡುವದು ಮತ್ತು ಹುಳವು ಅವರನ್ನು ಉಣ್ಣೆ ಯಂತೆ ತಿನ್ನುವದು; ಆದರೆ ನನ್ನ ನೀತಿಯು ಶಾಶ್ವತವಾಗಿ ರುವದು ಮತ್ತು ನನ್ನ ರಕ್ಷಣೆಯು ತಲತಲಾಂತರ ಗಳಿಗೂ ಇರುವದು.
ನಾನು ಕರ್ತನಲ್ಲಿ ಬಹಳವಾಗಿ ಸಂತೋಷಿ ಸುವೆನು; ನನ್ನ ಪ್ರಾಣವು ನನ್ನ ದೇವರಲ್ಲಿ ಉಲ್ಲಾಸ ಪಡುವದು; ಯಾಕಂದರೆ ಮದಲಿಂಗನು ಸೌಂದರ್ಯ ವಾಗಿ ತನ್ನನ್ನು ಶೃಂಗರಿಸುವ ಹಾಗೆಯೂ ಮದಲ ಗಿತ್ತಿಯು ಆಭರಣಗಳಿಂದ ತನ್ನನ್ನು ಅಲಂಕರಿಸುವ ಹಾಗೆಯೂ ಆತನು ರಕ್ಷಣೆಯ ವಸ್ತ್ರಗಳನ್ನು ನನಗೆ ತೊಡಿಸಿದ್ದಾನೆ, ನೀತಿಯ ನಿಲುವಂಗಿಯನ್ನು ನನಗೆ ಧರಿಸುವಂತೆ ಮಾಡಿದ್ದಾನೆ.
ಆ ದಿನಗಳಲ್ಲಿ ಯೆಹೂದವು ರಕ್ಷಿಸಲ್ಪಡುವದು; ಯೆರೂಸಲೇಮು ಭದ್ರವಾಗಿ ವಾಸಿಸುವದು; ಆಕೆಯು (ಯೆರೂಸ ಲೇಮು) ಕರೆಯಲ್ಪಡುವ ಹೆಸರು ಇದೇ--ನಮ್ಮ ನೀತಿ ಯಾಗಿರುವ ಕರ್ತನು.
ಆಗ ಆತನು ಅವರಿಗೆ--ಮೋಶೆಯ ನ್ಯಾಯ ಪ್ರಮಾಣದಲ್ಲಿಯೂ ಪ್ರವಾದನೆಗಳಲ್ಲಿಯೂ ಕೀರ್ತನೆ ಗಳಲ್ಲಿಯೂ ನನ್ನನ್ನು ಕುರಿತಾಗಿ ಬರೆಯಲ್ಪಟ್ಟವು ಗಳೆಲ್ಲವು ನೆರವೇರುವದು ಅಗತ್ಯವಾಗಿದೆ ಎಂಬ ಈ ಮಾತುಗಳನ್ನು ನಾನು ನಿಮ್ಮೊಂದಿಗೆ ಇದ್ದಾಗಲೇ ಹೇಳಿದ್ದೆನು ಅಂದನು.
ಇದಲ್ಲದೆ ಮೋಶೆಯು ಅರಣ್ಯದಲ್ಲಿ ಸರ್ಪವನ್ನು ಎತ್ತಿದ ಹಾಗೆಯೇ ಮನುಷ್ಯ ಕುಮಾರನು ಸಹ ಎತ್ತಲ್ಪಡತಕ್ಕದ್ದು.
ಲೋಕಾದಿಯಿಂದ ತನ್ನ ಎಲ್ಲಾ ಪರಿಶುದ್ಧ ಪ್ರವಾದಿ ಗಳ ಬಾಯಿಯ ಮುಖಾಂತರ ದೇವರು ತಿಳಿಸಿದ್ದೆ ಲ್ಲವುಗಳು ಯಥಾಸ್ಥಿತಿಗೆ ಬರುವ ಸಮಯದ ವರೆಗೆ ಪರಲೋಕದಲ್ಲಿ ಆತನು ಇರುವದು ಅವಶ್ಯವಾಗಿತ್ತು.
ಕರ್ತನಾದ ಯೇಸು ಕ್ರಿಸ್ತನ ಕೃಪೆಯಿಂದಲೇ ನಾವು ರಕ್ಷಣೆ ಹೊಂದುವೆವೆಂಬದಾಗಿ ನಂಬುತ್ತೇವಲ್ಲಾ; ಹಾಗೆಯೇ ಅವರೂ ಹೊಂದುವರು ಎಂದು ಹೇಳಿ ದನು.
ಅವರು ಅವನಿಗೆ ಒಂದು ದಿನವನ್ನು ನೇಮಿಸಿ ದಾಗ ಅನೇಕರು ಅವನ ನಿವಾಸಕ್ಕೆ ಬಂದರು; ಆಗ ಬೆಳಗಿನಿಂದ ಸಾಯಂಕಾಲದವರೆಗೆ ಮೋಶೆಯ ನ್ಯಾಯ ಪ್ರಮಾಣದಿಂದಲೂ ಪ್ರವಾದನೆಗಳಿಂದಲೂ ಯೇಸು ವಿನ ವಿಷಯದಲ್ಲಿ ಅವರನ್ನು ಒಡಂಬಡಿಸುತ್ತಾ ಅವರಿಗೆ ದೇವರ ರಾಜ್ಯವನ್ನು ವಿವರಿಸಿ ಸಾಕ್ಷೀಕರಿಸಿದನು.
ನೀತಿವಂತನು ನಂಬಿಕೆಯಿಂದಲೇ ಜೀವಿಸುವನು ಎಂದು ಬರೆಯಲ್ಪಟ್ಟಂತೆ ದೇವರ ನೀತಿಯು ಅದರಲ್ಲಿ ವಿಶ್ವಾಸದಿಂದ ವಿಶ್ವಾಸಕ್ಕೆ ಪ್ರಕಟವಾಯಿತು.
ಹೀಗೆ ಪಾಪವು ಮರಣವನ್ನುಂಟು ಮಾಡುವದಕ್ಕಾಗಿ ಪ್ರಭುತ್ವವನ್ನು ನಡಿಸಿದ ಹಾಗೆಯೇ ಕೃಪೆಯು ನೀತಿಯ ಮೂಲಕ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಾದ ನಿತ್ಯಜೀವ ವನ್ನುಂಟು ಮಾಡುವದಕ್ಕೆ ಪ್ರಭುತ್ವ ನಡಿಸುವದು.
ಅವರು ದೇವ ರಿಂದ ದೊರಕುವ ನೀತಿಯನ್ನರಿಯದೆ ಸ್ವನೀತಿಯನ್ನೇ ಸ್ಥಾಪಿಸಬೇಕೆಂದು ಪ್ರಯತ್ನಿಸುತ್ತಾ ಇದ್ದದರಿಂದ ದೇವರ ನೀತಿಗೆ ಅಧೀನರಾಗಲಿಲ್ಲ.
ಆದರೆ ನೀವು ಕ್ರಿಸ್ತ ಯೇಸುವಿನಲ್ಲಿ ರುವದು ಆತನಿಂದಲೇ; ಆತನು ನಮಗೆ ದೇವರ ಕಡೆಯಿಂದ ಜ್ಞಾನವು ನೀತಿ ಶುದ್ಧೀಕರಣ ವಿಮೋಚನೆ ಗಳಾಗಿ ಮಾಡಲ್ಪಟ್ಟಿದ್ದಾನೆ.
ದೇವರು ಅನ್ಯಜನರನ್ನು ನಂಬಿಕೆಯ ಮೂಲಕ ವಾಗಿಯೇ ನೀತಿವಂತರೆಂದು ನಿರ್ಣಯಿಸುವನೆಂಬ ದಾಗಿ ಬರಹವು ಮೊದಲೇ ಕಂಡು ಅಬ್ರಹಾಮ ನಿಗೆ--ನಿನ್ನ ಮೂಲಕ ಎಲ್ಲಾ ಜನಾಂಗಗಳವರಿಗೆ ಆಶೀರ್ವಾದವುಂಟಾಗುವದೆಂಬ ಸುವಾರ್ತೆಯನ್ನು ಮುಂಚಿತವಾಗಿಯೇ ಸಾರಿತು ಎಂಬದೇ.
ನಾನು ಕ್ರಿಸ್ತನಲ್ಲಿರುವ ವನಾಗಿ ಕಾಣಿಸಿಕೊಳ್ಳಬೇಕೆಂದು ನ್ಯಾಯಪ್ರಮಾಣ ದಿಂದಾಗುವ ಸ್ವನೀತಿಯನ್ನಾಶ್ರಯಿಸದೆ ಆತನನ್ನು ನಂಬು ವದರಿಂದ ದೊರಕುವಂಥ ಅಂದರೆ ನಂಬಿಕೆಯ ಆಧಾರ ದಿಂದ ದೇವರು ಕೊಡುವಂಥ ನೀತಿಯನ್ನೇ ಹೊಂದಿ ದ್ದೇನೆ.
ನಂಬಿಕೆಯಿಂದಲೇ ಹೇಬೆಲನು ಕಾಯಿನನ ಯಜ್ಞ ಕ್ಕಿಂತ ಅತಿ ಶ್ರೇಷ್ಠವಾದ ಯಜ್ಞವನ್ನು ದೇವರಿಗೆ ಸಮ ರ್ಪಿಸಿದನು. ಅದರ ಮೂಲಕ ಅವನು ನೀತಿವಂತ ನೆಂದು ಸಾಕ್ಷಿ ಹೊಂದಿದನು: ದೇವರು ಅವನ ಕಾಣಿಕೆಗಳ ವಿಷಯವಾಗಿ ಸಾಕ್ಷಿಕೊಟ್ಟನು; ಅವನು ಸತ್ತವನಾಗಿದ್ದರೂ ಅದರಿಂದ ಇನ್ನೂ ಮಾತನಾಡುತ್ತಾನೆ.
¶ ಯೇಸು ಕ್ರಿಸ್ತನ ದಾಸನೂ ಅಪೊಸ್ತಲನೂ ಆಗಿರುವ ಸೀಮೋನ ಪೇತ್ರನು ದೇವರ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ನೀತಿಯಿಂದ ನಮ್ಮೊಂದಿಗೆ ಅಮೂಲ್ಯವಾದ ನಂಬಿಕೆಯನ್ನು ಹೊಂದಿದವರಿಗೆ--