TSK

TSK · ರೋಮಾಪುರದವರಿಗೆ 5:19

Treasury of Scripture Knowledge references in Kannada KJV.

ಅಂಗೀಕಾರಕ್ಕೆ ಹಿಂತಿರುಗಿ

ಆದಾಗ್ಯೂ ಆತನನ್ನು ಜಜ್ಜುವದು ಕರ್ತನಿಗೆ ಮೆಚ್ಚಿಕೆ ಯಾಗಿತ್ತು. ಆತನು (ದೇವರು) ಆತನನ್ನು ಸಂಕಟಕ್ಕೆ ಒಳಪಡಿಸಿದನು; ನೀನು ಆತನ ಪ್ರಾಣವನ್ನು ಪಾಪ ಕ್ಕೋಸ್ಕರ ಬಲಿಯನ್ನಾಗಿ ಮಾಡುವಾಗ ಆತನು ತನ್ನ ಸಂತಾನವನ್ನು ನೋಡುವನು. ಆತನು ತನ್ನ ದಿವಸ ಗಳನ್ನು ಹೆಚ್ಚಿಸುವನು, ಕರ್ತನ ಸಂತೋಷವು ಆತನ ಕೈಯಲ್ಲಿ ಸಫಲವಾಗುವದು.

ಈ ವಿಷಯ ಹೇಗಂದರೆ, ಒಬ್ಬ ಮನುಷ್ಯ ನಿಂದಲೇ ಪಾಪವೂ ಪಾಪದಿಂದ ಮರಣವೂ ಲೋಕ ದೊಳಗೆ ಸೇರಿದವು; ಎಲ್ಲರೂ ಪಾಪಮಾಡಿದ್ದರಿಂದ ಮರಣವು ಹೀಗೆ ಎಲ್ಲರಲ್ಲಿಯೂ ವ್ಯಾಪಿಸಿತು.

ಹೀಗಿರಲಾಗಿ ಒಬ್ಬನ ಅಪರಾಧದಿಂದಲೇ ಎಲ್ಲಾ ಮನುಷ್ಯರಿಗೆ ಅಪರಾಧ ನಿರ್ಣಯವು ಹೇಗೆ ಬಂತೋ ಹಾಗೆಯೇ ಒಬ್ಬನ ನೀತಿಯಿಂದಲೇ ಉಚಿತಾರ್ಥವಾದ ದಾನವು ಎಲ್ಲಾ ಮನುಷ್ಯರಿಗೆ ಜೀವದ ನೀತಿ ನಿರ್ಣಯಕ್ಕಾಗಿ ಬಂದಿತು.

ತನ್ನ ಕೃಪಾಮಹಿಮೆಯ ಸ್ತುತಿಗಾಗಿ ಆತನು ನಮ್ಮನ್ನು ಆ ಪ್ರಿಯನಲ್ಲಿ ಅಂಗೀಕರಿಸಿದ್ದಾನೆ.

ಇದಾದ ಮೇಲೆ ಇಗೋ, ನಾನು ನೋಡಲಾಗಿ ಸಮಸ್ತ ಜನಾಂಗ ಕುಲ ಪ್ರಜೆ ಭಾಷೆಗಳೊಳಗಿಂದ ಯಾರೂ ಎಣಿಸಲಾಗದಂತ ಮಹಾ ಸಮೂಹವು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡವರಾಗಿ ತಮ್ಮ ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದುಕೊಂಡು ಸಿಂಹಾಸನದ ಮುಂದೆಯೂ ಕುರಿಮರಿಯಾದಾತನ ಮುಂದೆಯೂ